ಡಾ.ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಹೆಚ್ ಡಿ ದೇವೇಗೌಡ…

232
firstsuddi

ತುಮಕೂರು: ಸಿದ್ದಗಂಗಾ ಮಠದ ಡಾ . ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಸಂತಾಪ ಸೂಚಿಸಿದ್ದು, ಶತಮಾನದ ಸಂತ ತ್ರಿವಿಧ ದಾಸೋಹಿ ಡಾ|| ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ. ಅವರು ಬಸವಣ್ಣನವರ ಕಾಯಕವೇ ಕೈಲಾಸ ಹಾಗೂ ನಿತ್ಯ ದಾಸೋಹದ ಕೈಂಕರ್ಯದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಶಿವನನ್ನು ಕಂಡವರು. ಅವರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.