ಚಿಕ್ಕಮಗಳೂರು: ಮುಖ್ಯಮಂತ್ರಿ ಆದ ಬಳಿಕ ಹೆಚ್.ಡಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದು, ಇಂದು ರಾತ್ರಿ 7 ಗಂಟೆಗೆ ಶೃಂಗೇರಿಯ ಶಾರದಾಪೀಠದಲ್ಲಿ ಉಳಿದುಕೊಳ್ಳಲಿದ್ದು, ನಾಳೆ ಬೆಳಿಗ್ಗೆ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಚಿಕ್ಕಮಗಳೂರು ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಲಿದ್ದು, 2-30ಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜಿಲ್ಲಾಉಸ್ತುವರಿ ಸಚಿವ ಕೆ.ಜೆ ಜಾರ್ಜ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.










