ನವದೆಹಲಿ: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಶೀಘ್ರ ಗುಣ ಮುಖರಾಗಲಿ ಎಂದು ಲಕ್ಷಾಂತರ ಜನರು ಪ್ರಾರ್ಥಿಸಿಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಶ್ರೀಗಳು ಬೇಗ ಗುಣ ಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ನರೇಂದ್ರ ಮೋದಿ ಅವರು ಅವರು ಟ್ವಿಟ್ ಮೂಲಕ ಪರಮಪೂಜ್ಯ ಡಾಕ್ಟರ್ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳವರದು ಅಮೋಘ ವ್ಯಕ್ತಿತ್ವ . ಅವರ ಮಹೋನ್ನತ ಸೇವೆ ಕೋಟ್ಯಾಂತರ ಜನರ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ. ಶ್ರೀಗಳು ಬೇಗ ಗುಣ ಮುಖರಾಗಲಿ ಎಂದು ಹಾಗೂ ದೇವರು ಅವರಿಗೆ ಉತ್ತಮ ಆರೋಗ್ಯ ಕರುಣಿಸಲೆಂದು ಇಡೀ ರಾಷ್ಟ್ರ ಪ್ರಾರ್ಥಿಸುತ್ತಿದೆ ಎಂದು ಕನ್ನಡದಲ್ಲಿಯೇ ಟ್ವೀಟ್ ಮಾಡಿ ಪ್ರಾರ್ಥಿಸಿದ್ದಾರೆ.