ಮಂಗಳೂರು- ಮಂಗಳೂರು, ಬೆಳ್ತಂಗಡಿ, ಉಡುಪಿ, ದಕ್ಷಿಣ ಕನ್ನಡ, ಸೇರಿದಂತೆ ಶುಕ್ರವಾರ ರಾತ್ರಿಯಿಂದ ಮಳೆಯ ಅಬ್ಬರ ಹೆಚ್ಚಾಗಿದ್ದು, ಜಿಲ್ಲೆಯ ಹಲವು ಭಾಗಗಳಲ್ಲಿ ಭಾರೀ ಗಾಳಿಯಿಂದ ಮರಗಳು ಹಾಗೂ ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದ್ದು ಮುಂಜಾಗೃತ ಕ್ರಮವಾಗಿ ಮಂಗಳೂರು ಸೇರಿದಂತೆ ಜಿಲ್ಲಾದ್ಯಂತ ಶಾಲಾ ಕಾಲೇಜ್ ಗಳಿಗೆ ರಜೆ ಘೋಷಣೆ ಮಾಡಲಾಗಿರುತ್ತದೆ. ಹವಮಾನ ಇಲಾಖೆ ತಿಳಿಸಿದಂತೆ ಜೂನ್ 12ರ ವರೆಗೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದೆ.