ಮೂಡಿಗೆರೆ- ಶುಕ್ರವಾರದಿಂದಲೂ ಧಾರಾಕಾರ ಮಳೆ ಸುರಿಯುತ್ತಿದ್ದು ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ, ಕಳಸ, ಕುದುರೆಮುಖ, ಭಾಗದಲ್ಲಿ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಪಾಯದ ಮಟ್ಟ ಮೀರಿ ತುಂಗಾ, ಭದ್ರಾ,ಹೇಮಾವತಿ ನದಿಗಳು ಹರಿಯುತ್ತಿದ್ದು.ಹೊರನಾಡು ಸಮೀಪದ ಹೆಬ್ಬಾಳೆ ಸೇತುವೆಗೆ ಭದ್ರಾ ನದಿಯ ನೀರು ಅಪ್ಪಳಿಸುತ್ತಿದ್ದು, ಮುಳುಗಡೆ ಆಗುವ ಸಾಧ್ಯತೆ ಇದೆ. ಸದ್ಯಕ್ಕೆ ಕಳಸ – ಹೊರನಾಡು ರಸ್ತೆ ಸಂಪರ್ಕ ಬಂದ್ ಆಗಿದ್ದು. ಶುಕ್ರವಾರ ರಾತ್ರಿಯಿಂದ ಮೂಡಿಗೆರೆ ತಾಲೂಕಿನ ಸುತ್ತಮುತ್ತ ಮಳೆ ಹಿನ್ನೆಲೆಯಲ್ಲಿ ಹೇಮಾವತಿ ನದಿಯ ನೀರಿನ ಒಳಹರಿವು ಹೆಚ್ಚಳಗೊಂಡಿದೆ.