ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಗುಡುಗು ಮಿಂಚು ಸಹಿತ ಬೆಳಿಗ್ಗೆಯಿಂದ ಭಾರಿ ಮಳೆಯಾಗುತ್ತಿದ್ದು, ಗುಟ್ಟಹಳ್ಳಿ, ಬ್ಯಾಟರಾಯನಪುರ, ಶಾಂತಿನಗರ, ಶಿವಾನಂದ ಸರ್ಕಲ್, ದೇವನಹಳ್ಳಿ, ಡಬಲ್ ರೋಡ್, ಮೆಜಸ್ಟಿಕ್ ಸೇರಿದಂತೆ ಹಲವೆಡೆ ಧಾರಕಾರ ಮಳೆಯಾಗುತ್ತಿದ್ದು, ಇಂದಿನಿಂದ 5 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕೊಡಗು, ಕರಾವಳಿ, ಮಲೆನಾಡು ರಾಜ್ಯದ ದಕ್ಷಿಣ ಒಳನಾಡು ಭಾಗದಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.










