ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ-ಹವಾಮಾನ ಇಲಾಖೆ ಸೂಚನೆ…

195
firstsuddi

ಬೆಂಗಳೂರು : ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಪುದುಚೇರಿಯ ಬಳಿ ಸುಮಾರು 450 ಕಿ.ಮೀ ದೂರದಲ್ಲಿ ಸೈಕ್ಲೋನ್ ಅಬ್ಬರಿಸುತ್ತಿದ್ದು, ಇದರಿಂದಾಗಿ ಮುಂದಿನ ಎರಡು ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಚಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಉತ್ತರ ಕನ್ನಡ, ರಾಮನಗರ, ಬೆಂಗಳೂರು ಗ್ರಾಮೀಣ, ಹಾಸನ ಹಾಗೂ ಬೆಂಗಳೂರು ನಗರ ಭಾಗಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ರಮೇಶ್ ಬಾಬು ಅವರು ಮಾಹಿತಿ ನೀಡಿದ್ದಾರೆ.