ಬೆಂಗಳೂರು : ಫೆ. 4 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿರುವುದು ಕಾನೂನು ಬಾಹಿರ ಮತ್ತು ಅಸಂವಿಧಾನಿಕ, ಜನಜೀವನ ವ್ಯವಸ್ಥೆಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರಕ್ಕೆ ಸೂಚಿಸಿದೆ. ಮಹದಾಯಿ ನದಿ ನೀರು ಹಂಚಿಕೆ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡುವಂತೆ ಒತ್ತಾಯಿಸಿ ಫೆ. 4ರ ಭಾನುವಾರ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿತ್ತು.
ಇತ್ತೀಚೆಗೆ ರಾಜ್ಯದಲ್ಲಿ ಮೇಲಿಂದ ಮೇಲೆ ಬಂದ್ಗೆ ಕರೆ ನೀಡುತ್ತಿರೋದನ್ನ ಪ್ರಶ್ನಿಸಿ ರಾಜಾಜಿ ನಗರದ ಶ್ರದ್ಧಾ ಪೋಷಕರ ಸಂಘ ನ್ಯಾಯಾಲಯಕ್ಕೆ ಪಿಐಎಲ್ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹೆಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ಪೀಠ, ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಬಂದ್ ಮಾಡುವಂತಿಲ್ಲ. ಸುಪ್ರೀಂ ಆದೇಶವನ್ನ ಪಾಲಿಸಿ, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.
ಸರ್ಕಾರದ ಪರ ಹಾಜರಿದ್ದ ಎ ಎಜಿ ಪೊನ್ನಣ್ಣ ಸುಪ್ರೀಂಕೋರ್ಟ್ ಆದೇಶವನ್ನ ಪಾಲಿಸುವುದಾಗಿ ಕೋರ್ಟ್ ಗೆ ತಿಳಿಸಿದ್ರು. ಸರ್ಕಾರಿ ಪರ ವಕೀಲರ ಹೇಳಿಕೆ ಪರಿಗಣಿಸಿದ ಕೋರ್ಟ್ ಅಂತಿಮ ವಿಚಾರಣೆಯನ್ನ ಎರಡು ವಾರಗಳ ಕಾಲ ಮುಂದೂಡಿದೆ.