ಪೊಲೀಸರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರನೇ ವೇತನ ಆಯೋಗ ಜಾರಿಗೆ ಬರುವ ಮುನ್ನ ವೇತನ ಹೆಚ್ಚಳದ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಲಾಗುವುದು. ಹೋದ ಸರ್ಕಾರದಲ್ಲೂ ನಾನೇ ಗೃಹ ಇಲಾಖೆಯ ಜವಬ್ದಾರಿಯನ್ನು ವಹಿಸಿಕೊಂಡಿದ್ದೆ, ಈಗ ಹೊಸ ಸರ್ಕಾರ ರಚನೆಯಾಗಿದ್ದು ಮತ್ತೊಮ್ಮೆ ಪರಿಶೀಲನೆ ಮಾಡಿ ವೇತನ ಹೆಚ್ಚಳ ಮಾಡುತ್ತೇನೆ ಎಂದು ಹೇಳಿದರು.