ಸಲಿಂಗಕಾಮ ಅಪರಾಧವಲ್ಲ: ಸುಪ್ರೀಂ ಮಹತ್ವದ ತೀರ್ಪು…

380
firstsuddi

ನವದೆಹಲಿ: ಸಲಿಂಗಕಾಮವನ್ನು ಅಪರಾಧೀಕರಿಸುವ ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 377ರ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ಕಳೆದ ಜುಲೈನಲ್ಲಿ ತೀರ್ಪು ಕಾಯ್ದಿರಿಸಿದ್ದ ಸಾಂವಿಧಾನಿಕ ಪೀಠ ಇಂದು ತನ್ನ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ಸಲಿಂಗಕಾಮ ಅಪರಾಧವಲ್ಲ ಎಂದು ಹೇಳಿದೆ. ಸಲಿಂಗಕಾಮಿಗಳ ಕಾನೂನು ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು. ತೀರ್ಪು ನೀಡಿದ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ‘ವೈವಿಧ್ಯತೆ ಶಕ್ತಿಯನ್ನ ಗೌರವಿಸಬೇಕಾಗಿದೆ. ಸಲಿಂಗಿಗಳಿಗೆ ಸ್ವತಂತ್ರವಾಗಿ ಜೀವಿಸುವ ಹಕ್ಕಿದೆ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಸಲಿಂಗಕಾಮ ಅಪರಾಧವಲ್ಲ ಎಂದು ಘೋಷಿಸಿದ್ದಾರೆ. ಈ ಮೂಲಕ 156 ವರ್ಷಗಳ ಕಾನೂನಿಗೆ ಎಳ್ಳುನೀರು ಬಿಡಲಾಗಿದೆ.