ಹುಬ್ಬಳ್ಳಿ: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಸಮ್ಮಿಶ್ರ ಸರ್ಕಾರದ ಯಾವ ಶಾಸಕರೂ ನಮ್ಮ ಸಂರ್ಪಕದಲ್ಲಿ ಇಲ್ಲ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮುಖಂಡರ ಸಭೆ ಮಾಡುವುದಕ್ಕೆ ಹೋಗುತ್ತಿದ್ದೇನೆ. ನಾನು ಪ್ರಾಮಾಣಿಕವಾಗಿ ಹೇಳುತ್ತಿದ್ದೇನೆ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡುತ್ತಿಲ್ಲ. ಕಾಲವೇ ಅದಕ್ಕೆಲ್ಲ ಉತ್ತರ ಕೊಡುತ್ತದೆ ಎಂದಿದ್ದಾರೆ. ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಶೂಟೌಟ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಆ ರೀತಿ ಹೇಳಿಕೆ ನೀಡುವುದು ತಪ್ಪು. ಕ್ಷಮೆ ಕೇಳೋದು ಬಿಡೋದು ಅವರಿಗೆ ಬಿಟ್ಟಿದ್ದು. ಈ ಹಿಂದೆಯೂ ಹೆಣ್ಣು ಮಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಕುಮಾರಸ್ವಾಮಿ ಅವರು ಕ್ಷಮೆ ಕೇಳಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.