ಬೆಂಗಳೂರು: ಹೆಚ್.ಡಿ ದೇವೇಗೌಡ ಅವರನ್ನು ನಗರದ ಪದ್ಮನಾಭನಗರ ನಿವಾಸದಲ್ಲಿ ಭೇಟಿ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರು ಬಿಜೆಪಿಯವರು ಏನೇನು ಆಫರ್ ಮಾಡ್ತಿದಾರೆ.ಯಾರು ಯಾವ ಶಾಸಕರನ್ನು ಸಂಪರ್ಕ ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತಿದೆ. ಬಿಜೆಪಿ ನಾಯಕರಿಗೆ ಇಷ್ಟು ಹಣ ಎಲ್ಲಿಂದ ಬರುತ್ತದೆ ಎಂಬುವುದೇ ನನಗೆ ಶಾಕ್ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ನಿಲ್ಲಿಸುತ್ತೇನೆ ಎಂದು ಹೇಳುತ್ತಾರೆ. ಆದರೆ ರಾಜ್ಯದಲ್ಲಿ ಬಿಜೆಪಿ ನಾಯಕರು ಶಾಸಕರಿಗೆ ನೀಡುವ ಆಫರ್ ನೋಡಿದ್ರೆ ಶಾಕ್ ಆಗುತ್ತೆ. ಸಂತೋಷವಾಗಿ ಆಪರೇಷನ್ ಕಮಲ ಮಾಡಿಕೊಳ್ಳಲಿ. ಪ್ರಧಾನಿ ನರೇಂದ್ರ ಮೋದಿ ಅವರ ರೀತಿ ನಾನು ಡೋಂಗಿ ಬಜೆಟ್ ಮಂಡಿಸುವುದಿಲ್ಲ. ಉತ್ತಮ ಬಜೆಟ್ ಮಂಡಿಸುತ್ತೇನೆ ಎಂದಿದ್ದಾರೆ.










