ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದು ಹೇಗೆ ಎಂದು ನನಗೆ ಗೊತ್ತಿಲ್ಲ:ಬಿ.ಎಸ್. ಯಡಿಯೂರಪ್ಪ…

163
firstsuddi

ಬೆಂಗಳೂರು : ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ಕಣಕ್ಕಿಳಿಯಲಿದ್ದಾರೆ ಎನ್ನುವ ನಿರೀಕ್ಷೆಯಿತ್ತು. ಆದರೆ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದು ಹೇಗೆ ಎಂದು ನನಗೆ ಗೊತ್ತಿಲ್ಲ. ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ತೇಜಸ್ವಿನಿ ಅನಂತ್ ಕುಮಾರ್ ಅವರ ಹೆಸರನ್ನು ಶಿಫಾರಸ್ಸು ಮಾಡಿ ಕಳುಹಿಸಿದ್ದೆವು. ಆದರೆ ದೆಹಲಿಯಲ್ಲಿ ಏನಾಯಿತು ಎಂದು ಗೊತ್ತಿಲ್ಲ. ಹೈ ಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.