ನನ್ನದು ನಗು ಮುಖ,ನನ್ನ ಆಲೋಚನೆಗಳು ಯಾವತ್ತೂ ಧನಾತ್ಮಕ :ಡಿ.ವಿ. ಸದಾನಂದಗೌಡ…

281
firstsuddi

ಬೆಂಗಳೂರು: ನಗುವಿನ ಬಗ್ಗೆ ಲೇವಡಿ ಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ತಿರುಗೇಟು ನೀಡಿದ್ದಾರೆ. 
ಹೌದು ನನ್ನದು ನಗು ಮುಖ,ನನ್ನ ಆಲೋಚನೆಗಳು ಯಾವತ್ತೂ ಧನಾತ್ಮಕ . ಅದಕ್ಕೆ ನಾನು ನಗು ಮುಖದಲ್ಲಿ ಇರುತ್ತೇನೆ . ಗಂಡನನ್ನು ಕಳೆದು ಕೊಂಡವರ ಬಗ್ಗೆ ಕೀಳಾಗಿ ಮಾತನಾಡುವ ಋಣಾತ್ಮಕ ಚಿಂತನೆ ನನಗೆ ಯಾವತ್ತೂ ಬಂದಿಲ್ಲ . ಅಧಿಕಾರಕ್ಕೋಸ್ಕರ ಬದುಕಿ ಬಂದ ಸಿದ್ದಾಂತದೊಂದಿಗೆ ರಾಜಿ ಮಾಡಿಕ್ಕೊಂಡು ಹೀನವಾಗಿ ಬದುಕುವ ಜಾಯಮಾನ ನನ್ನದಲ್ಲ .
ಸಂಸದನಾಗಿ ನಾನೇನು ಮಾಡಿದ್ದೇನೆಂದು ನನ್ನ ಜನರಿಗೆ ಗೊತ್ತಿದೆ. ಸಾಂದರ್ಭಿಕ ಮೈತ್ರಿ ಮಾಡಿಕ್ಕೊಂಡು ಜನರನ್ನು ಏಮಾರಿಸಲು ಹೊರಟ ಹಗಲು ವೇಷಗಾರರಿಗೆ ಮನದಟ್ಟು ಮಾಡುವ ಅಗತ್ಯ ನನಗಿಲ್ಲ. ನಮ್ಮೊಂದಿಗೆ ಮೋದಿಯಂತ ಮೋದಿಜಿಯವರಿದ್ದಾರೆ . ಮೋದಿಜಿಯವರ ಜೊತೆಗಿದ್ದರೆ ದೇಶ ಸುರಕ್ಷಿತ ಎನ್ನುವ ಕೋಟಿ ಕೋಟಿ ಜನರಿದ್ದಾರೆ. ನೀವುಗಳು ಎದೆಯುಬ್ಬಿಸಿ.
ಹೇಳಿಕೊಳ್ಳುವಂತ ನಿಷ್ಕಳಂಕ ಚಾರಿತ್ರ್ಯದ ಒಬ್ಬನೇ ಒಬ್ಬ ನಾಯಕ ನಿಮ್ಮಲ್ಲಿದ್ದಾನೆ ಅನ್ನುವ ಛಾತಿ ನಿಮಗಿದೆಯಾ ? ರಾಜಕೀಯವನ್ನು ರಾಜಕೀಯವಾಗಿ ನಡೆಸಿ , ವೈಯುಕ್ತಿಕ ನಿಂದನೆ ನಿಮ್ಮ ತೂಕವನ್ನು ಅಳೆಯುತ್ತೆ ಎನ್ನುವ ಭಾವನೆ ನಿಮಗಿರಲಿ . ಜನ ಗಮನಿಸುತ್ತಾರೆಂಬ ಕನಿಷ್ಠ ಪ್ರಜ್ಞೆ ಕೂಡ ಇರಲಿ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.