ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬೇಸರವಾಗಿದೆ: ಲಕ್ಷ್ಮಿ ಹೆಬ್ಬಾಳ್ಕರ್…

316
firstsuddi

ಬೆಳಗಾವಿ: ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬೇಸರವಾಗಿದೆ. ಇಷ್ಟುಬೇಗ  ರಮೇಶ್  ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬಾರದಿತ್ತು. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ದ. ಹಂತ ಹಂತವಾಗಿ ಎಲ್ಲ ಸಿಗುತ್ತದೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ.  ಅತೃಪ್ತ ಶಾಸಕರನ್ನು ಬಿಜೆಪಿಯವರು  ಸಂಪರ್ಕ ಮಾಡಿದರೆ ನಾವು ಬಿಜೆಪಿ ಶಾಸಕರನ್ನು ಸಂಪರ್ಕಿಸುತ್ತೇವೆ ಎಂದಿದ್ದಾರೆ.