ಕ್ಯಾಂಟೀನ್‌ಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ:ಡಾ.ಜಿ ಪರಮೇಶ್ವರ್…

170
firstsuddi

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಇಂದು ದೀಪಾಂಜಲಿನಗರ, ನಾಯಂಡಹಳ್ಳಿಯ ಇಂದಿರಾ ಕ್ಯಾಂಟೀನ್‌ಗಳ ಅಡುಗೆ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಅವರು ಈಗಾಗಲೇ 33 ಕಡೆ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಲ್ಯಾಬ್ಗಳಿಗೆ ಕಳುಹಿಸಿದ್ದೇವೆ. ವರದಿ ಬಂದ ಬಳಿಕ ಆಹಾರದ ಗುಣಮಟ್ಟದ ಬಗ್ಗೆ ಇರುವ ಗೊಂದಲ ನಿವಾರಣೆಯಾಗಲಿದೆ.
ಶುಚಿತ್ವ ಇಲ್ಲದ ಕೆಲವು ಕ್ಯಾಂಟೀನ್‌ಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ. ಸಾರ್ವಜನಿಕರಿಂದಲೂ ಆಹಾರದ ರುಚಿ ಹಾಗೂ ಶುಚಿ ಬಗ್ಗೆ ಅಭಿಪ್ರಾಯ ಪಡೆದೆ. ಇಂದಿರಾ ಕ್ಯಾಂಟೀನ್ ಯೋಜನೆ ದೇಶದಾದ್ಯಂತ ಪ್ರಶಂಸೆಗೆ ಒಳಗಾಗಿದೆ. ಇನ್ನು ಮುಂದೆಯೂ ಉತ್ತಮ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.