ಬೆಂಗಳೂರು- ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಿ.ಎಂ ಆಗಿ ನಾನು ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ. ಸಿಎಂ ಸ್ಥಾನಕ್ಕಾಗಿ ನಾನು ಹೋರಾಟ ಮಾಡಲ್ಲ. ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಬೇಕೆಂದು ನಿರ್ಧರಿಸಿದ್ದೇನೆ.ಕೆಲವರು ಸರ್ಕಾರವನ್ನು ಅಸ್ಥಿರ ಮಾಡುವ ಪ್ರಯತ್ನ ಮಾಡುತ್ತಿದ್ದು, ಇಂತಹ ರಾಜಕೀಯ ಬೆಳವಣಿಗೆಯ ಬಗ್ಗೆ ನಾನು ಎಂದಿಗೂ ತಲೆ ಕೆಡಿಸಿಕೊಳ್ಳುವುದಿಲ್ಲ.ಸಮ್ಮಿಶ್ರ ಸರ್ಕಾರದಲ್ಲಿ ನನಗೆ ಇತಿಮಿತಿಗಳಿವೆ.ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸುವೆ.ಇನ್ಮುಂದೆ ಶನಿವಾರ ಮಾತ್ರ ಮುಖ್ಯಮಂತ್ರಿ ಜನತಾದರ್ಶನ ಕಾರ್ಯಕ್ರಮವಿರುತ್ತದೆ. ಪ್ರತಿದಿನ ಬಂದು ಸಮಯ ವ್ಯರ್ಥ ಮಾಡಬೇಡಿ. ಆಡಳಿತ ಯಂತ್ರ ಬಿಗಿಗೊಳಿಸಲು ಸಮಯಬೇಕು ಎಂದಿದ್ದಾರೆ.