ಬೆಂಗಳೂರು: ನನ್ನ ಇತಿಮಿತಿ ನನಗೆ ಗೊತ್ತಿದೆ, ಹದ್ದು ಮೀರಿ ಮಾತನಾಡುತ್ತಿರುವುದು ನೀವು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ನನ್ನ ಇತಿಮಿತಿ ಗೊತ್ತಿದೆ ಸಿಎಂ ಅವರಿಂದ ಕಲಿಯುವ ಅಗತ್ಯವಿಲ್ಲ . ನಾನು ಧಮ್ಕಿಗೆ ಬಗ್ಗುವವನಲ್ಲ. ರಾಜ್ಯದಲ್ಲಿ ಕುಮಾರಸ್ವಾಮಿ ಅಧಿಕಾರದಲ್ಲಿರಬಹುದು ಆದರೆ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ. ಸಿಎಂ ಸ್ಥಾನ ಶಾಶ್ವತ ಅಲ್ಲ. ಸೇಡು ತೀರಿಸಿಕೊಳ್ಳುವ ರಾಜಕಾರಣ ಮಾಡುತ್ತಿದ್ದಾರೆ.ನಾವು ಅಧಿಕಾರದಲ್ಲಿದ್ದಾಗ ಸೇಡು ತೀರಿಸಿಕೊಳ್ಳುವ ರಾಜಕಾರಣ ಮಾಡಿರಲಿಲ್ಲ.ಎ ಮಂಜು ಆರೋಪಕ್ಕೆ ಇದುವರೆಗೂ ಉತ್ತರ ಕೊಟ್ಟಿಲ್ಲ.ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ಬಗ್ಗೆ ಸಮಗ್ರ ತನಿಖೆಯಾಗುತ್ತಿದೆ. ತನಿಖೆ ಮಾಡಿ ರಾಜ್ಯದ ಜನರಿಗೆ ಸತ್ಯ ತಿಳಿಸಿ. ಸಂಜೆ ನಾಲ್ಕು ಗಂಟೆಗೆ ತುರ್ತು ಪತ್ರಿಕಾ ಗೋಷ್ಠಿ ನಡೆಸಿ ಭ್ರಷ್ಟಾಚಾರದ ಕುರಿತಾಗಿನ ಅನೇಕ ಪ್ರಮುಖ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.










