ಕೊಪ್ಪಳ- ಗಂಗಾವತಿಯಲ್ಲಿ ಮಾತನಾಡಿದ ಶಾಸಕ ಶ್ರೀರಾಮುಲು ಅವರು ಉತ್ತರ ಕರ್ನಾಟಕವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ಕಡೆಗಣಿಸಲಾಗಿದ್ದು, ನನಗೆ ಅಖಂಡ ಕರ್ನಾಟಕ ಬೇಕಾಗಿದೆ ಈಗಾಗಲೇ ಮುಖ್ಯಮಂತ್ರಿ ಐದಾರು ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದು, ಉತ್ತರ ಕರ್ನಾಟಕಕ್ಕೆ ತಾರತಮ್ಯ ಮಾಡುವುದು ಮುಂದುವರೆದರೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡಬೇಕಾಗುತ್ತದೆ. ಪ್ರತ್ಯೇಕ ರಾಜ್ಯಕ್ಕಾಗಿ ನಾನೇ ಮುಂದಾಳತ್ವ ವಹಿಸುತ್ತೇನೆ ಎಂದು ಹೇಳಿದ್ದಾರೆ.