ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ಹೇಳಿಕೆಗೆ ನಾನು ಬದ್ಧ. ಇನ್ನು 4 ದಿನಗಳು ಸಮಯಬೇಕು ನಂತರ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುತ್ತೇನೆ.ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರ ಜೊತೆಗೆ ಚರ್ಚೆ ನಡೆಸುವುದಿಲ್ಲ. ಕಳೆದ ಒಂದು ವಾರದಿಂದ ಮಾಧ್ಯಮಗಳು ಹೀರೋನ ವಿಲನ್ ಮಾಡಿದ್ದಾರೆ. ವಿಲನ್ ನನ್ನು ಹೀರೊ ಮಾಡಿದ್ದಾರೆ. ನನ್ನ ಬಗ್ಗೆ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಚಾರ ಮಾಡಲಾಗುತ್ತಿದೆ ಎಂದು ಮಾದ್ಯಮದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.










