ಬೆಂಗಳೂರು- ವಿಧಾನಸೌಧದ ಕೊಠಡಿಯಲ್ಲಿ ಪೂಜೆ ಸಲ್ಲಿಸಿ ಉನ್ನತ ಶಿಕ್ಷಣ ಖಾತೆಯನ್ನು ಸ್ವೀಕರಿಸಿದ ಜಿ.ಟಿ ದೇವೇಗೌಡ ಅವರು ನಾನು ಕಂದಾಯ ಹಾಗೂ ನೀರಾವರಿ ಇಲಾಖೆಯನ್ನು ಕೇಳಿದ್ದೆ ಆದರೆ ಆ ಎರಡು ಖಾತೆಗಳು ಕಾಂಗ್ರೆಸ್ ಪಾಲಾಗಿದ್ದು, ನನಗೆ ಉನ್ನತ ಶಿಕ್ಷಣ ಇಲಾಖೆ ಖಾತೆ ಸಿಕ್ಕಿದೆ.ಇದು ದೊಡ್ಡ ಖಾತೆ ಇದರ ಬಗ್ಗೆ ನಾನು ಹಗುರವಾಗಿ ಮಾತನಾಡುವುದಿಲ್ಲ. ಮುಖ್ಯಮಂತ್ರಿ ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ನಾನು ಉಳಿಸಿಕೊಳ್ಳುತ್ತೇನೆ. ಹಳ್ಳಿ-ಹಳ್ಳಿಗೂ ಉನ್ನತ ಶಿಕ್ಷಣವನ್ನು ನೀಡುತ್ತೇವೆ ಹಾಗೂ ಗುಣಾತ್ಮಕ ಶಿಕ್ಷಣ ನೀಡಿ ಬದಲಾವಣೆ ತರುತ್ತೇವೆ ಎಂದು ತಿಳಿಸಿದ್ದಾರೆ.