ಈ ಬಾರಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಹೆಚ್.ಡಿ ದೇವೇಗೌಡ…

122
firstsuddi

ಹಾಸನ: ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಹೊಳೆನರಸೀಪುರ ತಾಲೂಕು ಮೂಡಲಹಿಪ್ಪೆ ಗ್ರಾಮದಲ್ಲಿರುವ ಚನ್ನಕೇಶವ ದೇವಾಲಯಕ್ಕೆ ಪುತ್ರ ರೇವಣ್ಣ, ಸೊಸೆ ಭವಾನಿ ರೇವಣ್ಣ, ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಗೂ ಪಕ್ಷದ ಶಾಸಕರ ಜೊತೆ ಆಗಮಿಸಿ ನಾಮಪತ್ರವನ್ನು ಇಟ್ಟು ಪೂಜೆ ವಿಶೇಷ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ ದೇವೇಗೌಡ ಅವರು ಈ ಬಾರಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಶುಭ ಕಾರ್ಯಕ್ಕೂ ಮುನ್ನ ನಾವು ದೇವರ ದರ್ಶನ ಮಾಡುವುದು ವಾಡಿಕೆ. ಮೂಡಲ ಹಿಪ್ಪೆ ಗ್ರಾಮದಿಂದ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದೇನೆ. ಪ್ರಜ್ವಲ್ ರೇವಣ್ಣ ಹಾಸನ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದಿದ್ದಾರೆ.