ಸಾಲ ಮನ್ನಾ ಬಗ್ಗೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ : ಹೆಚ್.ಡಿ. ಕುಮಾರಸ್ವಾಮಿ.

284
firstsuddi

ಬೆಂಗಳೂರು : ರೈತರ ಸಾಲಮನ್ನಾ ಯೋಜನೆಗೆ ತಿಲಾಂಜಲಿ ಇಡಲು ಬಿಜೆಪಿ ಸರ್ಕಾರ ಅಡ್ಡ ದಾರಿ ತುಳಿಯುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್‍ನಲ್ಲಿ, “ ‘ರೈತರ ಸಾಲ ಮನ್ನಾ’ ಯೋಜನೆಗೆ ತಿಲಾಂಜಲಿ ಇಡಲು ಬಿಜೆಪಿ ಸರ್ಕಾರ ಅಡ್ಡ ದಾರಿ ತುಳಿಯುತ್ತಿರುವುದು ಖಂಡನೀಯ. ರೈತರ ಬಾಳಿಗೆ ರಾಜ್ಯ ಬಿಜೆಪಿ ಸರ್ಕಾರ ಕೊಳ್ಳಿ ಇಡಲು ಮುಂದಾಗಿದೆ. ದಾಖಲೆಗಳ ನೆಪವೊಡ್ಡಿ ಸಾಲ ಮನ್ನಾ ಯೋಜನೆಯಿಂದ ಒಂದು ಲಕ್ಷಕ್ಕೂ ಹೆಚ್ಚು ರೈತರನ್ನು ಕೈ ಬಿಡುವ ಮೂಲಕ ಬಿಜೆಪಿ ಸರ್ಕಾರ ರೈತರಿಗೆ ದೋಖಾ ಮಾಡುತ್ತಿದೆ. ಸಾಲ ಮನ್ನಾದ ಬಗ್ಗೆ ಬಿಜೆಪಿಯ ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದಾಗ ಮೀಸಲಿಟ್ಟಿದ್ದ ಇಪ್ಪತ್ತೈದು ಸಾವಿರ ಕೋಟಿ ರೂಪಾಯಿಗಳ ಹಣವನ್ನು ಬಿಜೆಪಿ ಸರ್ಕಾರ ಬೇರೆಡೆಗೆ ವರ್ಗಾಯಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಿಂದಲೂ ರಾಜ್ಯದ ಒಂದು ಲಕ್ಷದ ಐವತ್ತ್ಮೂರು ಸಾವಿರ ರೈತರಿಗೆ ವಂಚಿಸಲಾಗಿದೆ. ಸಾಲ ಮನ್ನಾ ಬಗ್ಗೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ. ರೈತರ ಪರವಾಗಿ ನಿಲ್ಲುತ್ತೇನೆ.” ಎಂದು ಟ್ವೀಟ್ ಮಾಡಿದ್ದಾರೆ.