ರಾಜ್ಯದಲ್ಲಿ ಯಾವ ಕ್ಷೇತ್ರ ಸೂಚಿಸಿದರೂ ನಾನು ಸ್ಪರ್ಧಿಸುತ್ತೇನೆ.- ಪ್ರಜ್ವಲ್ ರೇವಣ್ಣ…

735
firstsuddi

ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆಯನ್ನು ಸ್ಪಷ್ಪಪಡಿಸಿರುವ ಹೆಚ್.ಡಿ. ದೇವೇಗೌಡರ ಹೇಳಿಕೆಗೆ ಪ್ರತಿಕ್ರಯಿಸಿದ ಪ್ರಜ್ವಲ್ ರೇವಣ್ಣ ನನಗೆ ತುಂಬಾ ಸಂತೋಷವಾಗಿದೆ, ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ ಮತ್ತು ಎಚ್.ಡಿ. ರೇವಣ್ಣ ನಿರ್ಧರಿಸುತ್ತಾರೆ. ಅವರ ಆಜ್ಞೆಯನ್ನು ನಾನು ಪಾಲಿಸುತ್ತೇನೆ. ರಾಜ್ಯದಲ್ಲಿ ಯಾವ ಕ್ಷೇತ್ರ ಸೂಚಿಸಿದರೂ ನಾನು ಸ್ಪರ್ಧಿಸುತ್ತೇನೆ. ರಾಜ್ಯದ ಜನರ ಅಪೇಕ್ಷೆಯಂತೆ ಕೆಲಸ ಮಾಡುತ್ತೇನೆ ಎಂದಿದ್ದಾರೆ.