ರಶ್ಮಿಕಾ ಮಂದಣ್ಣರಂತಹ ಮಗಳನ್ನು ನಾನು ನಿಜ ಜೀವನದಲ್ಲಿ ಪಡೆದಿದ್ದರೆ ನನ್ನಂತಹ ಅದೃಷ್ಟಶಾಲಿ ಬೇರೆ ಯಾರೂ ಇರುತ್ತಿರಲಿಲ್ಲ:ಶಂಕರ್ ಅಶ್ವಥ್…

297
firstsuddi

ಬೆಂಗಳೂರು: ರಶ್ಮಿಕಾ ಮಂದಣ್ಣರಂತಹ ಮಗಳನ್ನು ನಾನು ನಿಜ ಜೀವನದಲ್ಲಿ ಪಡೆದಿದ್ದರೆ ನನ್ನಂತಹ ಅದೃಷ್ಟಶಾಲಿ ಬೇರೆ ಯಾರೂ ಇರುತ್ತಿರಲಿಲ್ಲ ಎಂದು ಹಿರಿಯ ನಟ ಶಂಕರ್ ಅಶ್ವಥ್ ಅವರು ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನಾನು ಚಲನಚಿತ್ರರಂಗ ಪ್ರವೇಶ ಮಾಡಿ ಮೂರು ದಶಕಗಳಾದರೂ ಈ ಅನುಭವ ಎಂದು ಹೊಂದಿರಲಿಲ್ಲ. ಒಬ್ಬ ಪ್ರಖ್ಯಾತ ನಾಯಕ ನಟಿ ನನ್ನನ್ನು ತಂದೆಯಂತೆ ಕಾಣದ್ದಲ್ಲದೆ, ಕತ್ತುಭುಜ ನೋವೆಂದು ಕುಳಿತಿದ್ದಾಗ ಹಿಂದಿನಿಂದ ಬಂದು ಭುಜವನ್ನು ವತ್ತಿದ್ದು ಒಬ್ಬ ಮಗಳೇ ಸರಿ, ಇಂತಹ ಮಗಳನ್ನು ನಾನು ನಿಜ ಜೀವನದಲ್ಲಿ ಪಡೆದಿದ್ದರೆ ನನ್ನಂತಹ ಅದೃಷ್ಟಶಾಲಿ ಬೇರೆ ಯಾರೂ ಇರುತ್ತಿರಲಿಲ್ಲ, ಧನ್ಯವಾದಗಳು ರಶ್ಮಿಕಾ ಮಂದಣ್ಣ ಎಂದು ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.