ಬೆಂಗಳೂರು: ನನ್ನ ಮತ್ತು ಹಲವು ನಾಯಕರ ಫೋನ್ ನನ್ನು ಕದ್ದಾಲಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ನೂರಕ್ಕೆ ನೂರು ಸತ್ಯವಾದ ಮಾತಾಗಿದ್ದು, ನಮ್ಮ ಪಕ್ಷದವರದ್ದು ಮಾತ್ರವಲ್ಲದೇ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನವರ ಫೋನ್ ಕೂಡ ಕದ್ದಾಲಿಕೆ ಮಾಡುತ್ತಿದ್ದಾರೆ. ನಾವು ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗ ಬೇಕು ಎಂದು ಆಗ್ರಹಿಸಿದ್ದಾರೆ.