ಪರಮೇಶ್ವರ್ ಅವರು ಬಿಜೆಪಿ ಸೇರುವುದಾದರೆ ಸೂಕ್ತ ಸ್ಥಾನಮಾನ, ಗೌರವ ಕೊಡುತ್ತೇವೆ: ಬಿ. ಎಸ್ ಯಡಿಯೂರಪ್ಪ…

268
firstsuddi

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್ ಯಡಿಯೂರಪ್ಪ ಅವರು ಅತೃಪ್ತ ಶಾಸಕರು ಅಸಮಾಧಾನವನ್ನು ಹೊರ ಹಾಕುತ್ತಿದ್ದಾರೆ. ಅತೃಪ್ತ ಶಾಸಕರ ನಡೆಯನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಈವರೆಗೂ ನಾವು ಅತೃಪ್ತ ಶಾಸಕರನ್ನು ಸಂಪರ್ಕ ಮಾಡಿಲ್ಲ. ಇಂದು ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. ಇನ್ನಾದರೂ ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡಲಿ. ನಮಗೆ ಪ್ರಮಾಣವಚನ ಕಾರ್ಯಕ್ರಮಕ್ಕೆ ಅಹ್ವಾನ ನೀಡಿಲ್ಲ. ಈ ಹಿಂದೆಯೂ ಅವರು ನಮಗೆ ಅಹ್ವಾನ ನೀಡಿಲ್ಲ. ಈಗಲೂ ನೀಡಿಲ್ಲ. ನಾವು ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ ಎಂದಿದ್ದಾರೆ.
ಬಿಎಸ್​ ಯಡಿಯೂರಪ್ಪ ಅವರಿಗೆ ನಮ್ಮ ಪಕ್ಷದ ಬಗ್ಗೆ ಕಾಳಜಿ ಇದ್ದರೆ ನಮ್ಮ ಪಕ್ಷಕ್ಕೆ ಬರಲಿ ಎಂಬ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಯಡಿಯೂರಪ್ಪ ಅವರು ಪರಮೇಶ್ವರ್ ಅವರು ಹೀಗೆ ಹಗುರವಾಗಿ ಮಾತನಾಡಬಾರದು. ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನವಿದೆ ಹಾಗಾಗಿ ಬಿಜೆಪಿಯವರು ನಿಮ್ಮನ್ನು ಆಹ್ವಾನಿಸುತ್ತೇವೆ. ಉಪಮುಖ್ಯಮಂತ್ರಿ ಪರಮೇಶ್ವರ್ ಬಗ್ಗೆ ಗೌರವವಿದೆ. ಹಾಗಾಗಿ ಬಿಜೆಪಿ ಸೇರುವುದಾದರೆ ಸೂಕ್ತ ಸ್ಥಾನಮಾನ ಗೌರವ ಕೊಡುತ್ತೇವೆ ಎಂದು ಟಾಂಗ್ ಕೊಟ್ಟಿದ್ದಾರೆ.