ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಸಾವಿನ ಬಗ್ಗೆ ತನಿಖೆ ನಡೆಸಬೇಕು: ಡಿ.ಕೆ ಶಿವಕುಮಾರ್…

290
firstsuddi

ಬೆಂಗಳೂರು:ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ  ಅವರ ಸಾವಿನ ಬಗ್ಗೆ ತನಿಖೆ ನಡೆಸಬೇಕಾಗಿದೆ ಎಂದು  ಸಚಿವ ಡಿ.ಕೆ ಶಿವಕುಮಾರ್ ಅವರು   ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್ ಅವರು  ನಿನ್ನೆ ರಾತ್ರಿ   ಮಧುಕರ್ ಶೆಟ್ಟಿ  ಅವರ ನಿಧನದ ಸುದ್ದಿ ವಿಷಯ ತಿಳಿದು ನನಗೆ ಆಶ್ಚರ್ಯವಾಯಿತು. ಮಧುಕರ್ ಶೆಟ್ಟಿ  ಅವರ ಸಾವು ಸಹಜವಾಗಿದೆಯೇ, ಇಲ್ಲವೇ, ಎಂಬ ಬಗ್ಗೆ ತನಿಖೆ ನಡೆಯಬೇಕು. ಮಧುಕರ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬದವರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.