ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೋಷನ್ ಬೇಗ್ ಅವರು ಅಧಿಕಾರಿಗಳ ತನಿಖೆಗೆ ಸಹಕರಿಸಿದ್ದಾರೆ. ಈಗಾಗಲೇ ತನಿಖೆ ಮುಕ್ತಾಯಗೊಂಡಿದೆ ಎಂದು ರೋಷನ್ ಬೇಗ್ ಅವರ ಪರ ವಕೀಲರಾದ ಶಶಿಕಿರಣ್ ಶೆಟ್ಟಿ ಅವರು ವಾದ ಮಂಡಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ ಸಿಬಿಐ ನ್ಯಾಯಾಲಯ ರೋಷನ್ ಬೇಗ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.










