ಬೆಂಗಳೂರು: ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಗೂಂಡಾ ವರ್ತನೆ ತೋರಿಸಿರುವ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಟ್ವಿಟ್ ಮಾಡಿದ್ದು,ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಯಿಂದ ಕುಡಿದ ಮತ್ತಿನಲ್ಲಿ ಕರ್ತವ್ಯ ನಿರತ ಅಧಿಕಾರಿಗಳೊಂದಿಗೆ ಗೂಂಡಾ ವರ್ತನೆ.ಹುಲಿ ಉಗುರು ಮಾರುತ್ತಿದ್ದವರ ಬಂಧನ ಪ್ರಶ್ನಿಸಿ ಅರಣ್ಯ ಇಲಾಖೆಯ ಕಚೇರಿಗೆ ನುಗ್ಗಿ ಧಮಕಿ ಹಾಕಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ. ತಕ್ಷಣವೇ ಶಾಸಕನ ವಿರುದ್ದ ಕಾನೂನು ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ಟ್ವಿಟ್ ಮಾಡಿದೆ.











