ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1076 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 38 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 11,439ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 9756 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 1306 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 377 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.










