ಕೊರೊನಾ ಅಟ್ಟಹಾಸ-ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,958 ಕೊರೊನಾ ಸೋಂಕು ಪತ್ತೆ-126 ಮಂದಿ ಸಾವು…

162
firstsuddi

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ 2,958 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 49,391 ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 126 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ 49,391 ಸೋಂಕಿತರ ಪೈಕಿ 14,183 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 33,514 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಈವರಗೆ 1,694 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.