ಕೊರೊನಾ ಅಟ್ಟಹಾಸ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 4,213 ಕೊರೊನಾ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆ…

174
firstsuddi

ನವದೆಹಲಿ : ದೇಶದಲ್ಲಿ ಮಹಾಮಾರಿ ವೈರಸ್ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4,213 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ. ಅಲ್ಲದೇ 97 ಮಂದಿ ನಿನ್ನೆ ಒಂದೇ ದಿನ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 2,206ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ. ದೇಶದಲ್ಲಿ 67,152 ಮಂದಿ ಸೋಂಕಿತರ ಪೈಕಿ 20,917 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 44,029 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.