ಮೈಸೂರು -ಮೈಸೂರು ಮಹಾನಗರ ಪಾಲಿಕೆ ಫಲಿತಾಂಶದ ಕುರಿತು ಮಾತನಾಡಿದ ಸಂಸದ ಪ್ರತಾಪ್ ಸಿಂಹ ಈ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಇದ್ದರೂ ನಮಗೆ ಮೈಸೂರಿನ ಜನ ಬೆಂಬಲ ನೀಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ನಡೆದ ಚುನಾವಣೆಯಲ್ಲಿ 62 ವಾರ್ಡ್ ಗಳಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿಯ ಬಂಡಾಯ ಅಭ್ಯರ್ಥಿ ಒಂದು ಕಡೆ ಗೆಲವು ಸಾಧಿಸಿದ್ದಾರೆ. ಹೀಗಾಗಿ ಬಿಜೆಪಿ ಒಟ್ಟು 23 ಸ್ಥಾನಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಒಟ್ಟಿಗೆ ಅಧಿಕಾರ ನಡೆಸುತ್ತಿರುವ ಸಂದರ್ಭದಲ್ಲೂ ಗೆದ್ದಿರುವುದು ಮೈಸೂರು ಮಹಾನಗರ ಪಾಲಿಕೆ ಇತಿಹಾಸದಲ್ಲೇ ಉತ್ತಮವಾದ ಸಾಧನೆಯಾಗಿದೆ. ಈಗ ಅಧಿಕಾರ ಹಿಡಿಯಲು ಜೆಡಿಎಸ್ ಮುಂದೆ ಆಯ್ಕೆ ಇದ್ದು, ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗುತ್ತಾರೆ ಎಂಬುದು ಅವರಿಗೆ ಬಿಟ್ಟಿದ್ದು. ಇಲ್ಲವಾದಲ್ಲಿ ನಾವು ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.