ಪಾಕ್ ಯುದ್ಧವಿಮಾನ ಹೊಡೆದುರುಳಿಸಿದ ಭಾರತ…

151

ನವದೆಹಲಿ: ಪುಲ್ವಾಮಾ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ಮಾಡಿದ್ದು, ಜೈಶ್-ಎ-ಮೊಹಮ್ಮದ್ ಉಗ್ರರ ಅಡಗುತಾಣಗಳ ಮೇಲೆ ಏರ್​ಸ್ಟ್ರೈಕ್​ ನಡೆಸಿತ್ತು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಭಾರತದ ವಾಯುಗಡಿ ಉಲ್ಲಂಘಿಸಿ ಪಾಕಿಸ್ತಾನದ ಯುದ್ಧ ವಿಮಾನ ಎಫ್-16ನನ್ನು ನೌಶೆರಾ ಸೆಕ್ಟರ್ ನಲ್ಲಿ ಭಾರತ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.