ಶ್ರೀನಗರ : ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿದ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಜಮ್ಮು ಕಾಶ್ಮೀರಾದ ದಕ್ಷಿಣ ಕಾಶ್ಮೀರ ಜಿಲ್ಲೆಯ ರೆಬನ್ ಪ್ರದೇಶದಲ್ಲಿ ಭಾರತೀಯ ಯೋಧರು ಉಗ್ರರಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಯೋಧರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿದಾಳಿ ನಡೆಸಿದ ಭಾರತೀಯ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.