ಜಮ್ಮು ಕಾಶ್ಮೀರಾದಲ್ಲಿ ಎನ್‍ಕೌಂಟರ್-ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…

206
firstsuddi

ಶ್ರೀನಗರ : ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೈನಿಕರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ನವಕಾಡಲ್ ಗುಂಡಿನ ಚಕಮಕಿ ನಡೆದಿದ್ದು, ನಿನ್ನೆ ರಾತ್ರಿಯೇ ಉಗ್ರರು ಅರಣ್ಯ ಪ್ರದೇಶದಲ್ಲಿ ಅಡಗಿ ಕುಳಿತಿರುವ ಖಚಿತ ಮಾಹಿತಿಯನ್ನು ತಿಳಿದ ಭಾರತೀಯ ಯೋಧರು ನಿನ್ನೆ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಇಂದು ಮುಂಜಾನೆ 2 ಸುಮಾರಿಗೆ ಉಗ್ರರು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದು, ಇದರಿಂದ ಕೂಡಲೇ ಕಾರ್ಯಪವೃತ್ತರಾದ ಯೋಧರು ಕಾರ್ಯಾಚರಣೆಯನ್ನು ಎನ್‍ಕೌಂಟರ್ ಆಗಿ ಮಾರ್ಪಡಿಸಿ ಉಗ್ರರತ್ತ ಗುಂಡಿನ ದಾಳಿ ನಡೆಸಿದ್ದು, ಸುಮಾರು 5 ಗಂಟೆಗಳ ಗುಂಡಿನ ದಾಳಿ ನಡೆದಿದ್ದು, ಮುನ್ನಚ್ಚರಿಕಾ ಕ್ರಮವಾಗಿ ಎನ್‍ಕೌಂಟರ್ ನಡೆಯುತ್ತಿದ್ದ ಸ್ಥಳದ ಸುತ್ತಮುತ್ತ ಇಂಟರ್‍ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಭಾರತೀಯ ಸೈನಿಕರು ಇಬ್ಬರು ಉಗ್ರರನ್ನು ಹೊಡೆದುರಳಿಸಿ ಅವರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.