ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ ಭಾರತದ ಹಾಕಿ ಟೀಂ, ಭಾರತ ಫೈನಲ್ಗೆ

590

ಕ್ರೀಡೆ :  ಏಷ್ಯಾದ ನಂ.1 ತಂಡವಾಗಲು ಪಣತೊಟ್ಟಿರುವ ಮನ್’ಪ್ರೀತ್ ಸಿಂಗ್ ನೇತೃತ್ವದ ಹಾಕಿ ಟೀಂ ಇಂಡಿಯಾ ಏಷ್ಯಾ ಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನಕ್ಕೆ ಮಣ್ಣುಮುಕ್ಕಿಸುವ ಮೂಲಕ ಭರ್ಜರಿಯಾಗಿ ಫೈನಲ್ ಪ್ರವೇಶಿಸಿದೆ.

ಇಲ್ಲಿ ನಡೆದ ಸೂಪರ್ 4 ಹಂತದ 3ನೇ ಹಾಗೂ ಕೊನೆ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 4-0 ಗೋಲುಗಳ ಭರ್ಜರಿ ಗೆಲುವು ದಾಖಲಿಸಿತು.

ಆರಂಭದಿಂದಲೇ ಸಾಕಷ್ಟು ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಪಾಕಿಸ್ತಾನ ಆಕ್ರಮಣಕಾರಿ ಆಟಕ್ಕೆ ಮುಂದಾಯಿತಾದರೂ, ಭಾರತದ ಗೋಲ್ ಕೀಪರ್ ಆಕಾಶ್ ಚಿಕ್ಟೆ ಗೋಲು ದಾಖಲಿಸಲು ಅವಕಾಶ ಮಾಡಿಕೊಡಲಿಲ್ಲ. ಮೊದಲ ಕ್ವಾರ್ಟರ್’ನಲ್ಲಿ ಪಾಕಿಸ್ತಾನ 3 ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲ್ ಆಗಿ ಪರಿವರ್ತಿಸಲು ವಿಫಲವಾಯಿತು.

ದ್ವಿತೀಯಾರ್ಧದಲ್ಲಿ ಭಾರತಕ್ಕೆ ಆರಂಭದಲ್ಲೇ ಯಶಸ್ಸು ದೊರೆಯಿತು. ಪಂದ್ಯದ 39ನೇ ನಿಮಿಷದಲ್ಲಿ ಸತ್ಬೀರ್ ಸಿಂಗ್ ಗೋಲಿನ ಖಾತೆ ತೆರೆದರು. ಇದಾದ ಬಳಿಕ ಹರ್ಮನ್’ಪ್ರೀತ್ ಸಿಂಗ್ 51ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು. ಮೂಲಕ ಭಾರತ 2-0 ಮುನ್ನಡೆ ಪಡೆದುಕೊಂಡಿತು.

ಭಾರತ ಸೂಪರ್ 4ನಲ್ಲಿ ಆಡಿದ 3 ಪಂದ್ಯಗಳಲ್ಲಿ 2 ಜಯ, 1 ಡ್ರಾ ಸಾಧಿಸಿ 7 ಅಂಕಗಳೊಂದಿಗೆ ಫೈನಲ್ ಪ್ರವೇಶಿಸಿತು. ಕಳೆದ ಬಾರಿ ರನ್ನರ್-ಅಪ್ ಆಗಿದ್ದ ಭಾರತ, ಭಾನುವಾರ ನಡೆಯಲಿರುವ ಅಂತಿಮ ಕದನದಲ್ಲಿ ಗೆದ್ದು ಪ್ರಶಸ್ತಿ ಎತ್ತಿಹಿಡಿಯವ ಉತ್ಸಾಹದಲ್ಲಿದೆ. ಮಲೇಷ್ಯಾ ಹಾಗೂ ಕೋರಿಯಾ ನಡುವಿನ ಪಂದ್ಯದಲ್ಲಿ ವಿಜೇತರಾದ ತಂಡವು ಫೈನಲ್’ನಲ್ಲಿ ಭಾರತದೊಂದಿಗೆ ಸೆಣಸಲಿದೆ.

LEAVE A REPLY

Please enter your comment!
Please enter your name here