ಹಾಸನ ಜಿಲ್ಲಾ ಕೇಂದ್ರದಲ್ಲಿ ಇಂದಿರಾ ಕ್ಯಾಂಟಿನ್: ಸಿದ್ದತೆಗೆ ಸೂಚನೆ

521

ಹಾಸನ : ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇಂದಿರಾ ಕ್ಯಾಂಟಿನ್ ಅನ್ನು ಪ್ರಾರಂಭಿಸುವುದರ ಕುರಿತು ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಬೆಂಗಳೂರು ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರು ಡಾ||ವಿಶಾಲ್ ಅವರ ಅಧ್ಯಕ್ಷತೆಯಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ನಡೆಯಿತು.

ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದಿರಾ ಕ್ಯಾಂಟೀನ್ ನಿರ್ಮಿಸಲು ನಿಗಧಿತ ಸ್ಥಳ ಪರಿಶೀಲನೆ ಹಾಗೂ ಜನಸಂದಣಿ ಹೆಚ್ಚಿರುವ ಸ್ಥಳಾಗಳಾದ ರೈಲ್ವೆ ನಿಲ್ದಾಣ, ಮಾರುಕಟ್ಟೆ, ಆಸ್ಪತ್ರೆ, ಬಸ್ ನಿಲ್ದಾಣ, ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ತಲುಪುವ ಸಲುವಾಗಿ ಇಂದಿರಾ ಕ್ಯಾಂಟೀನ್ ತೆರೆಯುವ ಕುರಿತು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲ್ಲಿ ಈ ಇಂದಿರಾ ಕ್ಯಾಂಟಿನ್ ತೆರೆಯುವ ಮೂಲಕ ಬಡವರು, ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಆಹಾರ ದೊರೆಯುವಂತೆ ಮಾಡಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಅಪರ ಜಿಲ್ಲಾಧಿಕಾರಿ ಪೂರ್ಣಿಮ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕೃಷ್ಣ ಮೂರ್ತಿ, ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here