ಬೆಂಗಳೂರು: ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಇಂದು ಹಾಗೂ ನಾಳೆ ಎರಡು ದಿನ ಭಾರತ್ ಬಂದ್ ಗೆ ಕರೆ ನೀಡಿದೆ. ಆದರೆ ಇಂದಿರಾ ಕ್ಯಾಂಟೀನ್ ಗೆ ಬಂದ್ ನ ಬಿಸಿ ತಟ್ಟಿಲ್ಲ. ಇಂದಿರಾ ಕ್ಯಾಂಟೀನ್ ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ. ಇಂದಿನ ಉಪಹಾರಕ್ಕೆ ಇಡ್ಲಿ ಮತ್ತು ಉಪ್ಪಿಟ್ಟು ಮಾಡಲಾಗಿದ್ದು, ಗ್ರಾಹಕರು ಎಂದಿನಂತೆ ಇಂದಿರಾ ಕ್ಯಾಂಟೀನ್ಗೆ ಉಪಹಾರಕ್ಕೆ ಬರುತ್ತಿದ್ದಾರೆ ಎಂದು ತಿಳಿದು ಬಂದಿದೆ.










