ನವದೆಹಲಿ : ದೇಶದಲ್ಲಿ ಕೊರೊನಾ ಭೀತಿ ಹೆಚ್ಚುತ್ತಿರುವ ಹಿನ್ನೆಲೆ, ದೆಹಲಿಯಲ್ಲಿ ನಡೆಯಬೇಕಿದ್ದ ಎಲ್ಲಾ ಐಪಿಎಲ್ ಪಂದ್ಯಗಳನ್ನು ದೆಹಲಿ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಕುರಿತು ಮಾಹಿತಿ ನೀಡಿದ ದೆಹಲಿಯ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು, ಪಂದ್ಯಗಳನ್ನು ವೀಕ್ಷಿಸಲು ಸಾವಿರಾರು ಮಂದಿ ಬರುತ್ತಾರೆ. ಅವರು ಎಲ್ಲಿಂದ ಬರುತ್ತಾರೆ ಎಂಬುವುದನ್ನು ತಿಳಿಯಲು ಆಗುವುದಿಲ್ಲ. ಸಾವಿರಾರು ಮಂದಿಯಲ್ಲಿ ಒಬ್ಬನಿಗೆ ವೈರಸ್ ಇದ್ದರೂ ಅದು ಹಲವು ಮಂದಿಗೆ ತಗಲುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರ ಮುಂಜಾಗೃತ ಕ್ರಮವಾಗಿ ದೆಹಲಿಯಲ್ಲಿ ಆಯೋಜಿಸಿರುವ ಐಪಿಎಲ್ ಪಂದ್ಯಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.










