ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ನಾನು ಏಳನೇ ಬಾರಿ ವಿಧಾನಸೌಧ ಪ್ರವೇಶಿಸಿದ್ದೇನೆ. ನನ್ನ ಅನುಭವದಲ್ಲಿ ಯಾರೂ ಕೂಡಾ ರಾಜ್ಯಪಾಲರಿಗೆ ಅಗೌರವ ತೋರಿಸಿರಲಿಲ್ಲ. ಅಧಿಕಾರಕ್ಕಾಗಿ ಹತಾಶರಾಗಿರುವ ಬಿಜೆಪಿ ನಾಯಕರು ರಾಜ್ಯಪಾಲರಿಗೆ ಅಗೌರವ ತೋರಿದ್ದಾರೆ. ರಾಜ್ಯಪಾಲರಿಗೆ ಅಗೌರವ ತೋರುವುದು ಒಳ್ಳೆಯದಲ್ಲ.
ಅಧಿಕಾರದ ಆಸೆಗಾಗಿ ಬಿಜೆಪಿ ನೀಚ ವ್ಯವಸ್ಥೆಗೆ ಹೋಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ .