ನವದೆಹಲಿ: ನಟಿ, ಮಾಜಿ ಸಂಸದೆ ಜಯಪ್ರದಾ ಅವರು ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜಯಪ್ರದಾ ಅವರನ್ನು ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಅಧಿಕೃತವಾಗಿ ಪಕ್ಷಕ್ಕೆ ಸೇರಿಸಿಕೊಂಡರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಮ್ಪುರ ಕ್ಷೇತ್ರದಿಂದ ಜಯಪ್ರದಾ ಅವರು ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.










