ಬೆಂಗಳೂರು: ಜೆಡಿಎಸ್ ವರಿಷ್ಠ ದೇವೇಗೌಡರ ಒಂದು ಕಾಲದ ಶಿಷ್ಯರಾಗಿ ಗುರುತಿಸಿಕೊಂಡು ಕೊನೆಗೆ ಪಕ್ಷದಲ್ಲಿ ತಮ್ಮನ್ನು ಕೀಳಾಗಿ ಕಾಣಲಾಗುತ್ತದೆ ಎನ್ನುವ ಅಸಮಾಧನದೊಂದಿಗೆ ಜೆಡಿಎಸ್ ಪಕ್ಷದಿಂದ ಬಂಡಾಯ ಸಿಡಿದು ಸದ್ಯ ಕಾಂಗ್ರೆಸ್ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿರುವ ರಾಮನಗರ ಜಿಲ್ಲೆ ಮಾಗಡಿ ತಾಲೂಕು ವಿಧಾನಸಭಾ ಕ್ಷೇತ್ರ ಜೆಡಿಎಸ್ ಬಂಡಾಯ ಶಾಸಕ ಹೆಚ್.ಸಿ ಬಾಲಕೃಷ್ಣ ತಮ್ಮ ಗುರುಗಳಾದ ದೇವೇಗೌಡರಿಗೆ ತಿರುಮಂತ್ರ ಹಾಕಿದ್ದಾರೆ ಎಂಬ ಚರ್ಚೆ ಶುರುವಾಗಿದೆ.
ಶಾಸಕ ಬಾಲಕೃಷ್ಣ ಅವರು ಕೇರಳಾಗೆ ತೆರಳಿ ದೇವೇಗೌಡರ ವಿರುದ್ಧವೇ ಬಾಲಕೃಷ್ಣ ಶತ್ರು ಸಂಹಾರ ಯಾಗ ನಡೆಸಿದ್ದಾರೆ ಎನ್ನುವ ವಿಷಯವೊಂದು ಹರಿದಾಡುತ್ತಿದ್ದು, ಇದಕ್ಕೆ ಸಂಬಂಧಪಟ್ಟ ಫೋಟೋಗಳು ವೈರಲ್ ಆಗಿದೆ. ಇದಕ್ಕೆ ಕಾರಣ ತಮ್ಮ ವಿರುದ್ಧ ಮಾಗಡಿಯಲ್ಲಿ ಹೊಸ ಅಭ್ಯರ್ಥಿಯನ್ನು ದೇವೇಗೌಡರು ಮುಂದಾಗಿರುವ ಹಿನ್ನಲೆಯಲ್ಲಿ ಬಾಲಕೃಷ್ಣ ಶತ್ರು ಸಂಹಾರ ಯಾಗ ನಡೆಸಿದ್ದಾರೆ ಎನ್ನಲಾಗಿದೆ. ಕೇರಳದ ಕಣ್ಣೀರಿನ ಭಗವತಿ ಹಾಗು ರಾಜೇಶ್ವರಿ ದೇವಾಲಯದಲ್ಲಿ ಪೂಜೆ ಮತ್ತು ಯಾಗ ನಡೆಸಿದ್ದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.