ಚೆನ್ನೈ: ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ವಿರುದ್ಧ ಮಾನಹಾನಿ ಲೇಖನ ಪ್ರಕಟಿಸಿದ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಪತ್ರಕರ್ತ ಹಾಗೂ ನಕ್ಕೀರನ್ ಪತ್ರಿಕೆ ಪ್ರಕಾಶಕ ನಕ್ಕೀರನ್ ಗೋಪಾಲ್ ಅವರನ್ನು ಇಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದು, ರಾಜ್ಯಪಾಲರ ವಿರುದ್ಧ ಮಾನಹಾನಿ ಬರಹ ಪ್ರಕಟಿಸಿದ್ದ ಗೋಪಾಲ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 124ರ ಅಡಿ ಎಫ್ಐಆರ್ ದಾಖಲಿಸಲಾಗಿದ್ದು, ಪುಣೆಗೆ ತೆರಳುತ್ತಿದ್ದ ಅವರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.










