ಬೆಂಗಳೂರು: ಬಿಜೆಪಿ ಆಪರೇಷನ್ ಕಮಲ ಮಾಡಲು ಮುಂದಾಗುತ್ತಿದೆ ಎನ್ನುವ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಉಳಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಕುಮಾರಕೃಪಾ ಅತಿಥಿ ಗೃಹದಲ್ಲಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ವೇಣುಗೋಪಾಲ್ ಅವರು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.