ಚಿಕ್ಕಮಗಳೂರು : ಕಡೂರು ತಾಲೂಕಿನ ತುರುವನಹಳ್ಳಿ ಗ್ರಾಮದಲ್ಲಿ ಹೊಲದಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. ಗ್ರಾಮದ ಲಕ್ಕಣ್ಣ ಎಂಬುವವರ ಜಮೀನಿನಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದ್ದು, ಸ್ಥಳಕ್ಕೆ ಕಡೂರು ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಡೂರು ಅರಣ್ಯ ಇಲಾಖೆ ವ್ಯಾಪ್ತಿ ಘಟನೆ ನಡೆದಿದೆ.










