ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಕಮಲ್ನಾಥ್ ಅವರು ಭೋಪಾಲ್ ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ಸಿಂಗ್ ಚೌಹಾಣ್,ಮಲ್ಲಿಕಾರ್ಜುನ ಖರ್ಗೆ, ಸೇರಿದಂತೆ ಇತರರು ಇದ್ದರು.










