ಬೆಂಗಳೂರು: ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ, ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಇಂದು ಮತ್ತು ನಾಳೆ ಎರಡು ದಿನ ಭಾರತ್ ಬಂದ್ ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಭಾರತ್ ಬಂದ್ಗೆ ಕನ್ನಡ ಚಿತ್ರರಂಗ ಕೂಡಾ ನೈತಿಕ ಬೆಂಬಲ ಸೂಚಿಸಿದೆ. ಕಾರ್ಮಿಕರಿಗೆ ಒಳ್ಳೆಯದಾಗಲಿ ಎಂಬ ಉದ್ದೇಶದಿಂದ ನೈತಿಕ ಬೆಂಬಲ ನೀಡುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಕಪ್ಪು ಪಟ್ಟಿ ಹಿಡಿದುಕೊಳ್ಳುವ ಮೂಲಕ ಬೆಂಬಲ ನೀಡುತ್ತೇವೆ. ಇಂದು ಮತ್ತು ನಾಳೆ ಸಿನಿಮಾ ಪ್ರದರ್ಶನ ಹಾಗೂ ಚಲನಚಿತ್ರ ಚಟುವಟಿಕೆಗಳು ಎಂದಿನಂತೆ ನಡೆಯುತ್ತವೆ ಎಂದು ಕರ್ನಾಟಕ ಫಿಲ್ಮ್ ಛೇಂಬರ್ ಅಧ್ಯಕ್ಷ ಚಿನ್ನೇಗೌಡರು ಅವರು ತಿಳಿಸಿದ್ದಾರೆ.










