ಬೆಂಗಳೂರು:ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ದೇಶದಾದ್ಯಂತ ಇಂದು ಸುಮಾರು ಎರಡು ಸಾವಿರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಪಂಚ ಭಾಷೆಗಳಲ್ಲಿ ತೆರೆ ಕಂಡಿದೆ. ಕೆಜಿಎಫ್ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದೇ ಮೊದಲು ಕನ್ನಡ ಸಿನಿಮಾವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ತೆರೆಕಾಣುತ್ತಿರುವುದು. ಕೆಜಿಎಫ್ ಚಿತ್ರ ದೇಶ ಸೇರಿದಂತೆ ಹೊರದೇಶಗಳಲ್ಲೂ ಬಿಡುಗಡೆಯಾಗಿದ್ದು, ಯಶ್ ಅಭಿಮಾನಿಗಳು ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.










